ಬಾಗಲಕೋಟೆ: ‘ಮುಖ್ಯಮಂತ್ರಿಯ ಅಧಿಕಾರ ಹಸ್ತಾಂತರದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ನವೆಂಬರ್ ವೇಳೆಗೆ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೆಪ್ಟೆಂಬರ್ ನಂತರ ಕ್ರಾಂತಿಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಕುರ್ಚಿಗಾಗಿ ನಡೆದಿರುವ ಕಿತ್ತಾಟವೂ ಚುನಾವಣೆಗೆ ಕಾರಣವಾಗಲಿದೆ’ ಎಂದರು.
‘ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಬಿಜೆಪಿ ಸಿದ್ಧವಾಗಿದೆ. ವಿಧಾನಸಭೆ ಚುನಾವಣೆಯಲ್ಲಿಯೂ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಕೊಡಲು ರಾಜ್ಯದಲ್ಲಿ ವಸೂಲಿ ಹೆಚ್ಚಿಸಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.