ADVERTISEMENT

ಬಾಗಲಕೋಟೆ | ಮಧ್ಯಪ್ರಾಚ್ಯ ಬಿಕ್ಕಟ್ಟು: ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 7:02 IST
Last Updated 2 ಮಾರ್ಚ್ 2026, 7:02 IST
<div class="paragraphs"><p>ಸಹಾಯವಾಣಿ</p></div>

ಸಹಾಯವಾಣಿ

   

ಬಾಗಲಕೋಟೆ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿನ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ತೊಂದರೆಯಲ್ಲಿರುವ ಪ್ರಯಾಣಿಕರಿಗಾಗಿ ಸಹಾಯವಾಣಿ ಆರಂಭಿಸಲಾಗಿದೆ.

ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿಯಿಂದಾಗಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ರಾಜ್ಯ ಹಾಗೂ ಜಿಲ್ಲೆಯ ಅನೇಕ ಪ್ರಯಾಣಿಕರು ಯುಎಇ ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

ADVERTISEMENT

ಬಾಗಲಕೋಟೆ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08354-252100, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.

ಮಧ್ಯಪ್ರಾಚ್ಯ ದೇಶಗಳಲ್ಲಿರುವ ನಿವಾಸಿಗಳು ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ 'ಸಾರಥಿ ಸಹಾಯತಾ' ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳಬೇಕು. ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ ಕಚೇರಿ ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.