ಬಾಗಲಕೋಟೆ: ಸರ್ಕಾರದ ಸ್ವನಿರ್ಧಾರಿತ ಉದ್ಯೋಗ ಯೋಜನೆಯಡಿ 60 ದಿನಗಳ ಚರ್ಮ ವಸ್ತುಗಳ ತಯಾರಿಕೆಗೆ ಸಂಬಂಧಿಸಿದಂತೆ ತರಬೇತಿ ಪಡೆದ ಫಲಾನುಭವಿಗಳಿಗೆ ಶಾಸಕ ಎಚ್.ವೈ. ಮೇಟಿ ಸೋಮವಾರ ಕಿಟ್ ವಿತರಿಸಿದರು.
ನವನಗರದ ಬಾಬು ಜಗಜೀವನ್ ರಾಂ ಭವನದಲ್ಲಿ ಹಮ್ಮಿಕೊಂಡಿದ್ದ ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾಂತ್ರಿಕ ತರಬೇತಿ ಪಡೆದ ಫಲಾನುಭವಿಗಳು ಸ್ವ ಉದ್ಯೋಗ ಆರಂಭಿಸಲು ಸಜ್ಜಾಗಿದ್ದಾರೆ. ತರಬೇತಿ ಕಾರ್ಯಕ್ರಮದಿಂದ ಅವರ ಜೀವನ ಸುಧಾರಣೆ ಆಗಲಿದೆ ಎಂದು ಹೇಳಿದರು.
ಫಲಾನುಭವಿಗಳಿಗೆ ಕೈಗಾರಿಕಾ ಉಪಕರಣಗಳು, ಕಚ್ಚಾ ಮಾಲು ಮತ್ತು ಇತರ ಅಗತ್ಯ ಸಲಕರಣೆಗಳನ್ನು ವಿತರಿಸಲಾಯಿತು. ಫಲಾನುಭವಿಗಳು ತರಬೇತಿಯ ಅನುಭವವನ್ನು ಹಂಚಿಕೊಂಡರು. ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಲಿಡಕರ್ ಸಂಸ್ಥೆ ಅಧ್ಯಕ್ಷ ನಾಗರಾಜ ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, ನಾಗರಾಜ ಹದ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.