ಮಹಾಲಿಂಗಪುರ: ಪಟ್ಟಣದಲ್ಲಿ ಗುರುವಾರ ಸಂಜೆ ಸುರಿದ ಮಳೆಗೆ ಹಾನಿಗೀಡಾದ ಕೆಂಗೇರಿಮಡ್ಡಿಯ ಮನೆಗಳಿಗೆ ಶಾಸಕ ಸಿದ್ದು ಸವದಿ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಮಹಾದೇವ ಸಾವಂತ, ಗೌರವ್ವ ಕೈಸೋಲಗಿ, ಶಾರವ್ವ ಶಿರೋಳ, ಚನ್ನಪ್ಪ ಪಾತ್ರೋಟ, ಪರಶುರಾಮ ವಾಲಿಕಾರ, ಅಮೀತ ಕಲಾಲ, ಕೃಷ್ಣಾ ಲಕ್ಷ್ಮೇಶ್ವರ, ಸಂಗೀತಾ ನಿಗಡೆ ಅವರ ಮನೆಗಳಿಗೆ ಭೇಟಿ ನೀಡಿ ಹಾನಿ ಕುರಿತು ಶಾಸಕರು ಮಾಹಿತಿ ಪಡೆದರು.
ಹಾನಿಗೀಡಾದ ಮನೆಗಳ ಸಮೀಕ್ಷೆ ನಡೆಸುವಂತೆ ತಹಶೀಲ್ದಾರ್ ಡಾ.ದೊಡ್ಡಪ್ಪ ಹೂಗಾರ ಅವರಿಗೆ ಸೂಚನೆ ನೀಡಿದ ಶಾಸಕರು, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಜಗದೀಶ್ ಈಟಿ, ಗ್ರಾಮ ಲೆಕ್ಕಾಧಿಕಾರಿ ಅವಿನಾಶ ಕಾಂಬಳೆ, ಪುರಸಭೆ ಸದಸ್ಯ ಶೇಖರ ಅಂಗಡಿ, ಮುಖಂಡ ಚನ್ನಪ್ಪ ರಾಮೋಜಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.