
ತೇರದಾಳ: ಭಾರತ ಪೋಲಿಯೊ ಮುಕ್ತವಾಗಿದೆ. ಆದರೆ, ನೆರೆಯ ರಾಷ್ಟ್ರಗಳಿಂದ ಹರಡಬಾರದೆಂದು ಆರೋಗ್ಯ ಇಲಾಖೆ ಮಕ್ಕಳಿಗೆ ಲಸಿಕೆ ಹಾಕಿ ರೋಗ ಬರದಂತೆ ತಡೆಯುವ ಪ್ರಯತ್ನ ನಡೆದಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಪಟ್ಟಣದಲ್ಲಿ ತಾಲ್ಲೂಕಾಡಳಿತ ಹಾಗೂ ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಭಾನುವಾರ ಇಲ್ಲಿನ ಬಸ್ ನಿಲ್ದಾಣದ ಮುಂಭಾಗದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಟ್ಟಣದಲ್ಲಿ 4,600 ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕೆ 5 ವರ್ಷದೊಳಗಿನ ಮಕ್ಕಳಿರುವ ಮನೆಯವರು ಸಹಕಾರ ನೀಡಿ. ಅಲ್ಲಲ್ಲಿ ಬೂತ್ ತೆರೆದು ಹಾಗೂ ಕೊನೆಗೆ ಮನೆಮನೆಗೆ ತೆರಳಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ತಹಶೀಲ್ದಾರ್ ವಿಜಯಕುಮಾರ ಕಡಕೋಳ, ಪುರಸಭೆ ಮುಖ್ಯಾಧಿಕಾರಿ ಎಫ್.ಬಿ. ಗಿಡ್ಡಿ, ಆರೋಗ್ಯ ಅಧಿಕಾರಿ ಡಾ.ಸುದರ್ಶನ ನಡೋಣಿ, ಡಾ.ನಾಡಪುರೋಹಿತ, ಆರೋಗ್ಯ ಇಲಾಖೆಯ ಕೆ.ಎಸ್.ವಸ್ತ್ರದ, ಮಹಾಲಿಂಗ ದಮಾಮಿ, ಶ್ರೀದೇವಿ ಸಿಂಧೆ, ಮುಖಂಡರಾದ ಪ್ರವೀಣ ನಾಡಗೌಡ, ಮಹಾವೀರ ಕೊಕಟನೂರ, ಅಲ್ಲಪ್ಪ ಬಾಬಗೊಂಡ, ಶಂಕರ ಕುಂಬಾರ, ಆಕಾಶ ತೇಲಿ, ಸಂತೋಷ ಜಮಖಂಡಿ, ಕಿರಣ ಹತ್ತೆನ್ನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.