ADVERTISEMENT

ಮುಖರ್ಜಿಯಿಂದ ಅಖಂಡತೆ ಉಳಿಕೆ: ಚರಂತಿಮಠ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 12:23 IST
Last Updated 24 ಜೂನ್ 2025, 12:23 IST
ಬಾಗಲಕೋಟೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ಯಾಮಪ್ರಸಾದ್ ಮುಖರ್ಜಿ ಅವರ ಸ್ಮೃತಿ ದಿನ, ಕರ್ನಾಟಕ ಕೇಸರಿ ಜಗನ್ನಾಥ್ ರಾವ್ ಜೋಶಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಗಳಿಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಪುಷ್ಪ ಅರ್ಪಿಸಿದರು
ಬಾಗಲಕೋಟೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ಯಾಮಪ್ರಸಾದ್ ಮುಖರ್ಜಿ ಅವರ ಸ್ಮೃತಿ ದಿನ, ಕರ್ನಾಟಕ ಕೇಸರಿ ಜಗನ್ನಾಥ್ ರಾವ್ ಜೋಶಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಗಳಿಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಪುಷ್ಪ ಅರ್ಪಿಸಿದರು   

ಬಾಗಲಕೋಟೆ: ‘ದೇಶದ ಏಕತೆಗಾಗಿ ಶ್ರಮಿಸಿದ ಶ್ಯಾಮಪ್ರಸಾದ್‌ ಮುಖರ್ಜಿ ಅವರಿಂದ ದೇಶದ ಅಖಂಡತೆ, ಸಾರ್ವಭೌಮತ್ವ ಉಳಿದಿದೆ’ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ನಗರದ ಬಿ.ವಿ.ವಿ. ಸಂಘದ ಮಿನಿ ಸಭಾಂಗಣದಲ್ಲಿ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದಿಂದ ಹಮ್ಮಿಕೊಂಡಿದ್ದ ಭಾರತೀಯ ಜನಸಂಘದ ಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಅವರ ಸ್ಮೃತಿ ದಿನ ಮತ್ತು ಕರ್ನಾಟಕ ಕೇಸರಿ ಜಗನ್ನಾಥ್ ರಾವ್ ಜೋಶಿ ಅವರ ಜನ್ಮದಿನ ಪ್ರಯುಕ್ತ ಅವರ ಭಾವಚಿತ್ರಗಳಿಗೆ ಪುಷ್ಪ ಅರ್ಪಿಸಿ ಗೌರವ ಸಲ್ಲಿಸಲಾಯಿತು.

‘ಅಖಂಡ ಭಾರತದ ಏಕತೆಗೆ ಶ್ರಮಿಸಿದ ನಾಯಕ, ಸ್ವಾತಂತ್ರ್ಯೋತ್ತರದಲ್ಲಿ ಹಿಂದೂ ಶೋಷಣೆ ವಿರುದ್ಧ ಪ್ರಮುಖ ದನಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕರ್ನಾಟಕದಲ್ಲಿ ತಮ್ಮ ಜೀವನವನ್ನು ರಾಷ್ಟ್ರಕ್ಕಾಗಿ ಸರ್ಮಪಿಸಿದ, ಜನಸಂಘದ ಸಂಸ್ಥಾಪಕ ಸದಸ್ಯರಲ್ಲೊಬ್ಬರಾದ ಜಗನ್ನಾಥ ರಾವ್‌ ಜೋಶಿ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.

ADVERTISEMENT

ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ, ನಗರಸಭೆ ಉಪಾಧ್ಯಕ್ಷೆ ಶೋಭಾ ರಾವ್, ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಕಾಸಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.