
ಬಾಗಲಕೋಟೆ: ಬಾದಾಮಿ, ಐಹೊಳೆಯ ಮನೆಗಳ ಸ್ಥಳಾಂತರ ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು, ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಆಗ್ರಹಿಸಿದರು.
ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ‘ಪ್ರಜಾವಾಣಿ’ಯ ಮಂಗಳವಾರ ‘ಪ್ರವಾಸೋದ್ಯಮಕ್ಕೆ ಸಿಗದ ಕಾಯಕಲ್ಪ’ ವಿಶೇಷ ವರದಿ ಪ್ರಸ್ತಾಪಿಸಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿ ಕಾಣದಿರುವುದು ನೋವಿನ ಸಂಗತಿಯಾಗಿದೆ ಎಂದರು.
ಕೂಡಲೇ ಎರಡೂ ಗ್ರಾಮಗಳ ಮನೆ ಸ್ಥಳಾಂತರಕ್ಕೆ ಹೆಚ್ಚಿನ ಅನುದಾನ ನೀಡಿ, ಪ್ರವಾಸೋದ್ಯಮ ಬೆಳವಣಿಗೆಗೆ ಅನುಕೂಲ ಮಾಡಿಕೊಡಬೇಕು ಎಂದು ಕೋರಿದರು.
ಸರಿಯಾದ ಪಾರ್ಕಿಂಗ್ ಇಲ್ಲ, ಉತ್ತಮ ವಸತಿ ಸೌಲಭ್ಯಗಳಿಲ್ಲ. ಸಾರಿಗೆ ಸಂಪರ್ಕವೂ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಬೇಕು. ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.