ಬಂಧನ( ಸಾಂಕೇತಿಕ ಚಿತ್ರ)
ಬಾಗಲಕೋಟೆ: ಐಡಿಬಿಐ ಬ್ಯಾಂಕ್‌ನಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಇಬ್ಬರು ಸರ್ಕಾರಿ ನೌಕರರನ್ನು ಬಂಧಿಸಲಾಗಿದೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಶಿವಕುಮಾರ (ಈಗ ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಣೆ) ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಉದಯಕುಮಾರ ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ’ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.
ಐಡಿಬಿಐ ಬ್ಯಾಂಕ್‌ನಲ್ಲಿ ಖಾತೆಗಳಲ್ಲಿದ್ದ ಪ್ರವಾಸೋದ್ಯಮ ಸೇರಿ ಐದು ಇಲಾಖೆಗಳಲ್ಲಿನ ₹6.08 ಕೋಟಿ ಮೊತ್ತವನ್ನು ಐಡಿಬಿಐ ಬ್ಯಾಂಕ್ ಅಧಿಕಾರಿಗಳು ಸ್ನೇಹಿತರ, ಸಂಬಂಧಿಗಳ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದರು. ₹4.79 ಕೋಟಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.