ಜಮಖಂಡಿ: ಇಲ್ಲಿನ ವೈನ್‌ಶಾಪ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಮಧುರಖಂಡಿ ಗ್ರಾಮದ ರಮೇಶ ಭೀಮಪ್ಪ ಕವಟಗಿ ಎಂಬುವರನ್ನು ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.
ನಗರದ ಹೊರವಲಯದಲ್ಲಿ ಶವ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ಈರಯ್ಯ ಮಠಪತಿ, ಪಿಎಸ್‌ಐ ವಸಂತ ಬಂಡಗಾರ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.