ADVERTISEMENT

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ನಿರಾಣಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 16:37 IST
Last Updated 20 ಜನವರಿ 2025, 16:37 IST
ಬಾಗಲಕೋಟೆಯ ಎಂಆರ್‌ಎನ್‌ ಆಯುರ್ವೇದ ಕಾಲೇಜಿನಲ್ಲಿ  ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮಾಜಿ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಿದರು 
ಬಾಗಲಕೋಟೆಯ ಎಂಆರ್‌ಎನ್‌ ಆಯುರ್ವೇದ ಕಾಲೇಜಿನಲ್ಲಿ  ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮಾಜಿ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಿದರು    

ಬಾಗಲಕೋಟೆ: ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು. ಅದಕ್ಕೆ ಅವಶ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಎಂಆರ್‌ಎನ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಎಂಆರ್‌ಎನ್‌ ಇನ್‌ಸ್ಟಿಟ್ಯೂಟ್ ಆಫ್‌ ನರ್ಸಿಂಗ್ ಸೈನ್ಸ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜೀವನದ ಏಳು, ಬೀಳುಗಳ ನಡುವೆ ಹಲವು ಸಮಸ್ಯೆಗಳನ್ನು ಎದುರಿಸಿ ಬೆಳೆದಿದ್ದೇನೆ. ಶಿಕ್ಷಣ ಕ್ಷೇತ್ರದ ಸೇವೆ ಮಾಡಲು ಸಿದ್ಧನಾಗಿದ್ದೇನೆ ಎಂದರು

ಬೆಂಗಳೂರಿನ ಆರ್‌ಜಿಯುಎಚ್‌ಎಸ್‌ ಸೆನೆಟ್‌ ಸದಸ್ಯ ಜೆ.ಬಿ. ಕೋನರೆಡ್ಡಿ ಮಾತನಾಡಿ, ಉತ್ತಮ ಶಿಕ್ಷಣ ಪಡೆದು, ಸಾಧನೆ ಮಾಡಬೇಕು ಎಂದರು.

ADVERTISEMENT

ಮುಖ್ಯ ಅತಿಥಿಯಾಗಿದ್ದ ಬೆಂಗಳೂರಿನ ಆಯುಷ್ ಇಲಾಖೆ ಸಂಶೋಧನಾ ಅಧಿಕಾರಿ ಶಶಿಧ ದೊಡ್ಡಮನಿ ಮಾತನಾಡಿ, ಸಂಶೋಧನೆಗಳಿಗೆ ಹೆಚ್ಚು ಮಹತ್ವ ಕೊಡಬೇಕು. ಇಲಾಖೆಯ ಧನಸಹಾಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಆಡಳಿತಾಧಿಕಾರಿ ಡಾ.ಶಿವಕುಮಾರ ಗಂಗಾಲ, ಸಂಸ್ಥೆಯ ಭವಿಷ್ಯದ ರೂಪರೇಷ ತಿಳಿಸಿದರು. ಸಂಸ್ಥೆಯ ಅಧ್ಯಕ್ಷೆ ಮಾಧುರಿ ಮುಧೋಳ, ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಪ್ರಹ್ಲಾದ ಗಂಗಾವತಿ ಡಾ.ಸಂತೋಷ ಯಡಹಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.