ಕೆರೂರ ಜೆಡಿಎಸ್ ಕಾರ್ಯಕರ್ತರು ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸನ್ಮಾನಿಸಿದರು
ಕೆರೂರ: ರಾಜ್ಯದ ಮೂರು ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳೇ ಕಣಕ್ಕೆ ಇಳಿಯಲ್ಲಿದ್ದಾರೆ. ಸೂಕ್ತವಾದ ಅಭ್ಯರ್ಥಿಗಳ ಬಗ್ಗೆ ಕೇಂದ್ರ ನಾಯಕರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಕೆರರೂರಿನಲ್ಲಿ ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಜೆಡಿಎಸ್ ಪಕ್ಷ ಸಂಘಟನೆಯನ್ನು ಬಲ ಪಡಿಸಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸದಸ್ಯತ್ವ ಅಭಿಯಾನ, ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಶಕ್ತಿ ತುಂಬಲು ಪ್ರವಾಸ ಕೈಗೊಂಡಿದ್ದೇವೆ. ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ ಎರಡು ಬಾರಿ ಸ್ಪರ್ಧಿಸಿ ಪಕ್ಷವನ್ನು ಬಲ ಪಡಿಸಲು ಸಾಕಷ್ಟು ಕಾರ್ಯಕರ್ತರ ವಿಶ್ವಾಸವನ್ನು ಪಡೆದುಕೊಂಡಿದ್ದಾರೆ ಮುಂದಿನ ದಿನಮಾನಗಳಲ್ಲಿ ಶಾಸಕರಾಗುವಂತ ಎಲ್ಲ ಶಕ್ತಿಯು ಅವರಲ್ಲಿದೆ ಎಂದರು.
ಜೆಡಿಎಸ್ ಶಾಸಕಾಂಗ ನಾಯಕ ಸುರೇಶ ಬಾಬು, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಮಾಜಿ ಸಚಿವ ಅಲಕೋಡ ಹನಮಂತಪ್ಪ, ಮಾಜಿ ಶಾಸಕ ವೀರಭದ್ರಪ್ಪ ಹಾಲಹೋಳ್ಳಿ, ಜೆಡಿಎಸ್ ಸ್ಥಳೀಯ ಮುಖಂಡರಾದ ಟೋಪೇಶ ಬದಾಮಿ, ಭದ್ರಪ್ಪ ಜಲಗೇರಿ, ಮಂಜುನಾಥ ಪತ್ತಾರ, ಶಂಕ್ರಪ್ಪ ಗದಗಿನ ಮತ್ತಿತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.