ADVERTISEMENT

ಹೊಸ ನ್ಯಾಯಬೆಲೆ ಅಂಗಡಿ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2023, 14:51 IST
Last Updated 6 ಅಕ್ಟೋಬರ್ 2023, 14:51 IST

ಬಾಗಲಕೋಟೆ: ನವನಗರದ ಸೆಕ್ಟರ್ ನಂ.1 ರಿಂದ 30ರವರೆಗಿನ ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡುವ ಸಲುವಾಗಿ ಸಂಘ–ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಸಹಕಾರಿ ಸಂಘವು ಕನಿಷ್ಠ ಮೂರು ವರ್ಷಗಳಿಂದ ಚಾಲನೆಯಲ್ಲಿದ್ದು, ಹಿಂದಿನ ಎರಡು ವರ್ಷಗಳಲ್ಲಿ ಕನಿಷ್ಠ ₹2 ಲಕ್ಷ ನಿರಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು. ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರವುದಿಲ್ಲ. ಅಂಗವಿಕಲ ವ್ಯಕ್ತಿಗಳು ಹಾಗೂ ತೃತೀಯ ಲಿಂಗದ ವ್ಯಕ್ತಿಗಳೆಂದು ದೃಢೀಕರಿಸುವ ಬಗ್ಗೆ ವೈದ್ಯಕೀಯ ಅಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ ಸಲ್ಲಿಸಬೇಕು.

ಅರ್ಜಿ ನಮೂನೆಯನ್ನು ಬಾಗಲಕೋಟೆ ತಹಶೀಲ್ದಾರ್ ಅಥವಾ ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನ.2 ರಂದು ಸಂಜೆ 5.30ರೊಳಗೆ ತಹಶೀಲ್ದಾರ್ ಕಚೇರಿಗೆ ಸಲ್ಲಿಸುವಂತೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.