ಬಾಗಲಕೋಟೆ: ಈ ವರ್ಷ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಬರಗಾಲ ಇದ್ದಾಗಲೇ ಲೋಡ್ ಶೆಡ್ಡಿಂಗ್ ಮಾಡಿರಲಿಲ್ಲ. ಈ ವರ್ಷ ಜಲಾಶಯಗಳಲ್ಲಿಯೂ ನೀರಿನ ಸಂಗ್ರಹ ಚೆನ್ನಾಗಿದೆ. ಆದ್ದರಿಂದ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದರು.
ಒಂದು ವೇಳೆ ವಿದ್ಯುತ್ ಕೊರತೆ ಎದುರಾದರೆ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿ ಮಾಡಿ, ಸರಬರಾಜು ಮಾಡಲಾಗುವುದು ಎಂದು ಹೇಳಿದರು.
ಆಡಳಿತ ಪಕ್ಷದಲ್ಲಿ ಗೊಂದಲವೇ ಇಲ್ಲ. ಇದು ಮಾಧ್ಯಮಗಳು ಸೃಷ್ಟಿ ಮಾಡುತ್ತಿವೆ. ಟೀ ಕಪ್ ನಲ್ಲಿ ಬಿರುಗಾಳಿ ಬಂದಿರುವ ರೀತಿ ಮಾಡಲಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.