ಕೆರೂರ: ‘ರಾಷ್ಟ್ರೀಯ ಸೇವಾ ಯೋಜನಾ ಶಿಬಿರವು ವಿಧ್ಯಾರ್ಥಿಗಳಲ್ಲಿ ಸಾಮಾಜಿಕ ಅರಿವು ಮೂಡಿಸಲು ಸಹಕಾರಿಯಾಗಿದೆ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಮಲ್ಲಪ್ಪ ಹೇಳಿದರು.
ಅವರು ಸಮಿಪದ ದತ್ತು ಗ್ರಾಮ ಹನಮಸಾಗರದಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆರೂರ ಇವರು ಆಯೋಜಿಸಿದ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ವಿಧ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯೊಂದಿಗೆ ಸಾಮಾಜಿಕ ಹಾಗೂ ಗ್ರಾಮೀಣ ಭಾಗದ ಜನರ ಜೀವನ ಅರಿಯಬೇಕು, ಅವುಗಳನ್ನು ಮಾಡಲು ಇಂತಹ ಶಿಬರಗಳು ಕಲಿಸಿಕೊಡುತ್ತವೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಕಾಲೇಜಿನ ಸಿಡಿಸಿ ಸದಸ್ಯರು, ಸಿಬ್ಬಂದಿ ವರ್ಗದವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.