ADVERTISEMENT

‘ಸೇವಾ ಮನೋಭಾವ ರೂಪಿಸಿಕೊಳ್ಳಿ’: ಎಂ.ಎಂ. ಜಮಖಾನಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 15:45 IST
Last Updated 1 ಜೂನ್ 2025, 15:45 IST
ಗುಳೇದಗುಡ್ಡ ತಾಲ್ಲೂಕಿನ ಕೆಲವಡಿಯಲ್ಲಿ ಜರುಗಿದ ಎನ್‌ಎಸ್‌ಎಸ್‌ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ.ಎಂ. ಜಮಖಾನಿ ಮಾತನಾಡಿದರು 
ಗುಳೇದಗುಡ್ಡ ತಾಲ್ಲೂಕಿನ ಕೆಲವಡಿಯಲ್ಲಿ ಜರುಗಿದ ಎನ್‌ಎಸ್‌ಎಸ್‌ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ.ಎಂ. ಜಮಖಾನಿ ಮಾತನಾಡಿದರು    

ಗುಳೇದಗುಡ್ಡ: ‘ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು. ದೇಶ ಸೇವೆಯೇ ಈಶ ಸೇವೆ’ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಎಂ.ಎಂ. ಜಮಖಾನಿ ಹೇಳಿದರು.

ಅವರು ತಾಲ್ಲೂಕಿನ ಕೆಲವಡಿಯಲ್ಲಿ ಜರುಗಿದ 2024-25 ನೇ ಸಾಲಿನ ಎನ್‌ಎಸ್‌ಎಸ್‌ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಆಧುನಿಕತೆ ಮತ್ತು ಹೊಸ ಶಿಕ್ಷಣದ ಪ್ರಭಾವದಿಂದ ಇಂದಿನ ಮಕ್ಕಳಲ್ಲಿ ಗುರು ಹಿರಿಯರ ಬಗ್ಗೆ ಗೌರವ ಕಡಿಮೆಯಾಗುತ್ತಿದೆ. ದೇಶ ಸೇವೆ ಮಾಡಬೇಕೆನ್ನುವ ಆಶಯ ಕಡಿಮೆಯಾಗುತ್ತಿದೆ. ಇದರಿಂದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಯುವಕರು ಉತ್ತಮ ನಡತೆ ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಎ.ಎಚ್.ಹಡಗಲಿ ಮಾತನಾಡಿ, ‘ಶಿಬಿರಾರ್ಥಿಗಳು ಶ್ರಮದಾನ ಜೊತೆ ಸ್ವಚ್ಚ ಭಾರತ ಮತ್ತು ಹಲವು ವಿಷಯಗಳ ಕುರಿತು ಗ್ರಾಮದಲ್ಲಿ ಜಾಗೃತಿ ಮೂಡಿಸಿರುವುದು ಉತ್ತಮ ಕೆಲಸ’ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಮಾತನಾಡಿ, ‘ವಿದ್ಯಾರ್ಥಿಗಳು ಬದುಕಿನಲ್ಲಿ ಯಶಸ್ಸು ಗಳಿಸಲು ಶ್ರಮ ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕು. ಮೂಲಭೂತ ಕರ್ತವ್ಯಗಳನ್ನು ಎಲ್ಲರೂ ಅನುಸರಿಸಬೇಕು. ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು’ ಎಂದು ಹೇಳಿದರು.

ಗ್ರಾಮಸ್ಥರಾದ ಲಕ್ಷಣ, ಸಿದ್ದಪ್ಪ ಹರಗಲಮನಿ, ಬಸಯ್ಯ ಮಠಪತಿ, ಶಿಬಿರಾಧಿಕಾರಿ ಸಂತೋಷ್, ಅನ್ನಪೂರ್ಣಾ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.