ADVERTISEMENT

ಬಾಗಲಕೋಟೆ: ಕೋವಿಡ್-19ಗೆ ಮತ್ತೊಬ್ಬರು ಬಲಿ, ಮೃತರ ಸಂಖ್ಯೆ 4ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 7:56 IST
Last Updated 28 ಜೂನ್ 2020, 7:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾಗಲಕೋಟೆ: ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ತಾಲ್ಲೂಕಿನ ಮುಡಪಲಜೀವಿ ಗ್ರಾಮದ 55 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.

ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ ಅವರು, ತೀವ್ರ ಉಸಿರಾಟದ ತೊಂದರೆಯ ಕಾರಣ ಜೂನ್ 26ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಅವರಿಗೆ ಸೋಂಕು ದೃಢಪಟ್ಟಿತ್ತು.

ಕೋವಿಡ್-19 ನಿಯಮಾವಳಿ ಪ್ರಕಾರ ಮೃತರ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ ರಾಜೇಂದ್ರ ತಿಳಿಸಿದ್ದಾರೆ.

ADVERTISEMENT

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.