ಮುಧೋಳ: ನಗರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಜೇಷ್ಠತೆ ಆಧಾರದಲ್ಲಿ ಕೆಲಸವಹಿಸುತ್ತಿಲ್ಲ. ಕಿರಿಯ ಆರೋಗ್ಯ ನಿರೀಕ್ಷಕರ ಸಂಬಂಧಿಗಳಿಗೆ ಪ್ರಾತಿನಿಧ್ಯತೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಭೀಮ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್ ಸಂಘಟನೆ ವತಿಯಿಂದ ಮಂಗಳವಾರ ನಗರಸಭೆ ಎದರು ಪ್ರತಿಭಟನೆ ನಡೆಸಲಾಯಿತು.
ಸಂಘಟನೆಯ ಸಂಸ್ಥಾಪಕ ಸುನೀಲ ಕಂಬೋಗಿ ಮಾತನಾಡಿ, ‘ಕಿರಿಯ ಆರೋಗ್ಯ ನಿರೀಕ್ಷಕರು ತಮ್ಮ ಮನಬಂದಂತೆ ನಡೆದುಕೊಳ್ಳುತ್ತಿದ್ದು, ತಮ್ಮ ಸಂಬಂಧಿಗಳಿಗೆ ಅವಕಾಶ ನೀಡಿ 2018ರಿಂದ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಹೊರಗುತ್ತಿಗೆ ನೌಕರರಿಗೆ ಪ್ರತಿ ತಿಂಗಳು ಸರಿಯಾಗಿ ಸಂಬಳ ಪಾವತಿಸುತ್ತಿಲ್ಲ. ಹಾಗೂ ಇಪಿಎಫ್ ಭರಣ ಮಾಡುತ್ತಿಲ್ಲ. ತಹಶೀಲ್ದಾರರು, ಪೌರಾಯುಕ್ತರು ನ್ಯಾಯ ದೊರಕಿಸಬೇಕು’ ಎಂದು ಆಗ್ರಹಿಸಿದರು.
ಪೌರಾಯುಕ್ತ ಗೋಪಾಲ ಕಾಶಿ, ಹೋರಾಟಗಾರರನ್ನು ಸಮಾಧಾನ ಪಡಿಸಿ ಒಂದು ವಾರದಲ್ಲಿ ಸರಿಪಡಿಸಲಾಗುವುದು ಎಂದು ಹೇಳಿದರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮಹಾದೇವ ಸಣಮುರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಮುಖಂಡರಾದ ಸದಾಶಿವ ಬೋಯಿ, ಮಹಾದೇವ ಮೀಸಿ, ಯಮನಪ್ಪ ಮಾಂಗ, ಮಾರುತಿ ಕಂಬೋಗಿ ಶೇಖರ ಬಾಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.