ADVERTISEMENT

ಆಮ್ಲಜನಕ ಘಟಕ ಉದ್ಘಾಟನೆ

ಆಮ್ಲಜನಕದ ಕೊರತೆಯಾಗದು: ಶಾಸಕ ಸಿದ್ದು ಸವದಿ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2022, 1:51 IST
Last Updated 27 ಆಗಸ್ಟ್ 2022, 1:51 IST
ರಬಕವಿ ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿದರು
ರಬಕವಿ ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿದರು   

ರಬಕವಿ ಬನಹಟ್ಟಿ: ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳ ಮತ್ತು ಅಲ್ಲಿಯ ವೈದ್ಯರ ಸೇವೆ ಸ್ಮರಣಿಯ. ಕೋವಿಡ್ ಸಂದರ್ಭದಲ್ಲಿ ಆಮ್ಲಜನಕದ ತೊಂದರೆಯಾಗಿತ್ತು. ಈಗ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ₹1.20 ಕೋಟಿ ವೆಚ್ಚದಲ್ಲಿ ಆಮ್ಲಜನಕ ಉತ್ಪಾದನಾ ಘಟಕದ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆಯಾಗುವುದಿಲ್ಲ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಶುಕ್ರವಾರ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಭಾರತ ದೇಶ ತನ್ನೆಲ್ಲ ಪ್ರಜೆಗಳಿಗೆ ಉಚಿತ ಕೋವಿಡ್ ಲಸಿಕೆಯನ್ನು ನೀಡುವುದರ ಮೂಲಕ ಕೋವಿಡ್‍ ರೋಗವನ್ನು ಸಮರ್ಥವಾಗಿ ಎದುರಿಸಿತು. ಬೆಂಗಳೂರಿನ ಯುನೈಟೆಡ್ ವೇ ಎಂಬ ಸಂಸ್ಥೆಯವರು ಬಾಗಲಕೋಟೆ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಉಚಿತವಾಗಿ ನೀಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಯುನೈಟೆಡ್ ಸಂಸ್ಥೆಯ ಪೀಟರ್ ಮಾತನಾಡಿ, ಭಾರತ ದೇಶದ ಗ್ರಾಮೀಣ ಭಾಗಗಳ ಆಸ್ಪತ್ರೆ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿಧಗೊಳಿಸುವುದು ನಮ್ಮ ಗುರಿಯಾಗಿದೆ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಜಿ.ಎಚ್‍. ಗಲಗಲಿ ಮಾತನಾಡಿದರು. ನಗರಸಭೆಯ ಅಧ್ಯಕ್ಷ ಸಂಜಯ ತೆಗ್ಗಿ, ಉಪಾಧ್ಯಕ್ಷೆ ವಿದ್ಯಾ ಧಬಾಡಿ, ತಹಶೀಲ್ದಾರ್ ಎಸ್‍.ಬಿ. ಇಂಗಳೆ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸಪ್ರಭು ಹಟ್ಟಿ, ವೈದ್ಯಾಧಿಕಾರಿ ಡಾ.ಎನ್.ಎಂ.
ನದಾಫ್, ನೋಡಲ್ ಅಧಿಕಾರಿ ಡಾ.ಕುಸುಮಾ ಮಾಗಿ, ಸಿಪಿಐ ಐ.ಎಂ.ಮಠಪತಿ, ಧರೆಪ್ಪ ಉಳ್ಳಾಗಡ್ಡಿ ಇದ್ದರು.

ಭಾರತಿ ಶಿರಗೂರ ಪ್ರಾರ್ಥಿಸಿದರು. ಎಂ.ಕೆ.ಮುಲ್ಲಾ ಸ್ವಾಗತಿಸಿದರು. ಸ್ಮಿತಾ ಕಾಳಗಿ ನಿರೂಪಿಸಿದರು. ಡಾ.ಎನ್.ಎಂ. ನದಾಫ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.