ರಬಕವಿ ಬನಹಟ್ಟಿ: ಮನುಷ್ಯ ಆರೋಗ್ಯವಂತನಾಗಿ ಬದುಕಲು ಉತ್ತಮ ಪರಿಸರ ಅಗತ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಅವರು ಶುಕ್ರವಾರ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಿಮಿತ್ತವಾಗಿ ಸಸಿ ನೆಟ್ಟು ’ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಸಸಿಗಳನ್ನು ನೆಡಬೇಕು. ಮನೆಗೊಂದು ಮರ ನೆಟ್ಟರೆ ಉರಿಗೊಂದು ವನ ನಿರ್ಮಾಣ ಮಾಡಲು ಸಾಧ್ಯ. ಅರಣ್ಯ ಎಲ್ಲ ಸಂಪತ್ತಿಗಿಂತಲೂ ಶ್ರೇಷ್ಠವಾದುದು‘ ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಪುಂಡಲೀಕ ಪಲಭಾವಿ, ಧರೆಪ್ಪ ಉಳ್ಳಾಗಡ್ಡಿ, ತಹಶೀಲ್ದಾರ್ ಪ್ರಶಾಂತ ಚನಗೊಂಡ, ಉಪ ತಹಶೀಲ್ದಾರ್ ಎಸ್.ಎಲ್.ಕಾಗಿಯವರ, ಶಿರಸ್ತೆದಾರ ಬಸವರಾಜ ಬಿಜ್ಜರಗಿ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ, ವಿನೋದ ಪತ್ತಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.