ADVERTISEMENT

ಪಟ್ಟದಕಲ್ಲು ಸ್ಮಾರಕಗಳಿಗೆ ಬೆಳಕಿನ ಮೆರುಗು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 2:37 IST
Last Updated 20 ಡಿಸೆಂಬರ್ 2025, 2:37 IST
ವಿದ್ಯುತ್‌ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿರುವ ಪಟ್ಟದಕಲ್ಲಿನ ಸ್ಮಾರಕ
ವಿದ್ಯುತ್‌ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿರುವ ಪಟ್ಟದಕಲ್ಲಿನ ಸ್ಮಾರಕ   

ಬಾಗಲಕೋಟೆ: ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಚಾಲುಕ್ಯರ ವಿಶ್ವ ಪಾರಂಪರಿಕ ತಾಣವಾದ ಐತಿಹಾಸಿಕ ಪಟ್ಟದಕಲ್ಲಿನ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರದ ಮೆರುಗು ನೀಡಲಾಗಿದೆ.

ವಿದ್ಯುತ್ ದೀಪಾಲಂಕಾರದ ಡೆಮೊ ವೀಕ್ಷಣೆಯ ನಂತರ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ‘ಪಟ್ಟದಕಲ್ಲಿನಲ್ಲಿ ₹ 1.40 ಕೋಟಿ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ. ಸಂಜೆ 6ರಿಂದ ರಾತ್ರಿ 9ರವರೆಗೆ ದೀಪಾಲಂಕಾರ ಇರಲಿದೆ. ಭಾರತೀಯ ಪುರಾತತ್ವ ಇಲಾಖೆಯು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಿಆರ್.ಎಸ್ ಅನುದಾನದ ಅಡಿಯಲ್ಲಿ ಈ ವ್ಯವಸ್ಥೆ ಮಾಡಿದ್ದು, ದೀಪಗಳ ಜೋಡಣೆ ಕಾರ್ಯ ಪೂರ್ಣಗೊಂಡಿದ್ದು ಮೂರು ದಿನಗಳ ಕಾಲ ಡೆಮೊ ಮಾಡಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯುತ್ ದೀಪಾಲಂಕಾರದ ಜೊತೆಗೆ ಇಂಪಾದ ಸಂಗೀತ ಕೇಳುವಂತೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯ ನಿರ್ವಹಣೆಯನ್ನು ಮೂರು ವರ್ಷಗಳ ಕಾಲ ಇಂಡಿಯನ್ ಆಯಿಲ್ ಕಾರ್ಪೋರೇಷನ್‌ದವರೇ ಮಾಡಲಿದ್ದಾರೆ. ನಂತರ ಭಾರತೀಯ ಪುರಾತತ್ವ ಇಲಾಖೆಯವರು ಮಾಡಲಿದ್ದಾರೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ, ಉಪ ಅಧೀಕ್ಷಕ ಶ್ರೀಗುರು ಭಾಗಿ, ಹಿರಿಯ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ದ ದೇಸಾಯಿ ಇದ್ದರು.

ವಿದ್ಯುತ್‌ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿರುವ ಪಟ್ಟದಕಲ್ಲಿನ ಸ್ಮಾರಕ
ವಿದ್ಯುತ್‌ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿರುವ ಪಟ್ಟದಕಲ್ಲಿನ ಸ್ಮಾರಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.