ಬಾಗಲಕೋಟೆ: ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ಮಾರಾಟ ಮಾಡದಂತೆ ನಗರಸಭೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದೇ ಬಗೆಯ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಸ್ವಾತಂತ್ರ್ಯ ದಿನಾಚರಣೆ ಸಂಬಂಧ ರಚಿಸಲಾದ ವಿವಿಧ ಸಮಿತಿಗಳ ಸಿದ್ಧತೆ ಕುರಿತು ಚರ್ಚಿಸಿದರು. ಆಗಸ್ಟ್ 15ರಂದು ಬೆಳಿಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಲಿದ್ದಾರೆ ಎಂದರು.
ಮಾಜಿ ಸೈನಿಕರೂ ಸೇರಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮಾಡಲಾಗುತ್ತಿದೆ. ನಂತರ ಸಾಂಸ್ಕೃತಿಕ, ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಪ್ರಭಾಕರ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್. ಕರಡಿಗುಡ್ಡ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರಪಾದ ಡೂಗನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.