
ಬಾಗಲಕೋಟೆ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು, ಹಿಂಗಾರು ಹಂಗಾಮಿನ ತಯಾರಿಗೆ ಸಹಾಯ ಆಗುತ್ತದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ನಡೆದ ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ಸಮ್ಮೇಳನದ ನೇರ ಪ್ರಸಾರ ವೀಕ್ಷಿಸಿದ ನಂತರ ಮಾತನಾಡಿದ ಅವರು, ರೈತರೊಂದಿಗೆ ಸಾವಯವ ಮತ್ತು ನೈಸರ್ಗಿಕ ಕೃಷಿಯ ಬಗ್ಗೆ ಸಂವಾದ ಮಾಡಿದರು.
ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಹಟ್ಟಿ ಮಾತನಾಡಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ರೈತರಿಗೆ ಆಗುವ ಅನೂಕೂಲಗಳ ಬಗ್ಗೆ ವಿವರಿಸಿದರು.
ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮಾತನಾಡಿ, ಜಿಲ್ಲೆಯ 1,57,866 ಫಲಾನುಬವಿಗಳಿಗೆ ₹31.57 ಕೋಟಿ ನೇರವಾಗಿ ರೈತರ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಜಮಾದಾರ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಮುಖ್ಯಸ್ಥ ಗುರುದತ್ತ ಹೆಗಡೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.