
ಮ್ಯೂಸಿಕ್ ಮೈಲಾರಿ
ಬಾಗಲಕೋಟೆ: ಪೋಕ್ಸೊ ಪ್ರಕರಣದ ಆರೋಪಿ ಮ್ಯೂಸಿಕ್ ಮೈಲಾರಿಯನ್ನು ಮಹಾಲಿಂಗಪುರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಮಹಾಲಿಂಗಪುರದ ಲಾಡ್ಜ್ ವೊಂದರಲ್ಲಿ ತಮ್ಮೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ದೂರು ನೀಡಿದ್ದಾರೆ.
ವೈದ್ಯಕೀಯ ತಪಾಸಣೆ ನಂತರ ಮೈಲಾರಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ಧಾರ್ಥ ಗೋಯಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.