ಮುಧೋಳ: ಬೇರೆ ರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಲಾಡ್ಜ್‌ಗಳ ಮೇಲೆ ಗುರುವಾರ ರಾತ್ರಿ ದಾಳಿ ನಡೆಸಿದ ಪೊಲೀಸರು 10 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ನಗರದ ಶಿವದುರ್ಗಾ, ಸುರಭಿ, ಓಂಕಾರ ಹಾಗೂ ಸಪ್ತಗಿರಿ ಲಾಡ್ಜ್‌ಗಳ ಮೇಲೆ ದಾಳಿ ನಡೆಸಿದ ಪೊಲೀಸರು ಅಸ್ಸಾಂ, ಪಶ್ಚಿಮ ಬಂಗಾಳ, ಮಹರಾಷ್ಟ್ರ ಹಾಗೂ ಕರ್ನಾಟಕ ಮೂಲದ ಯುವತಿಯರನ್ನು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಧೋಳ ನಗರ ಠಾಣೆಯಲ್ಲಿ 11 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ದಾಳಿ ಕಾರ್ಯದಲ್ಲಿ ಪಾಲ್ಗೊಂಡಿದ್ದ ಡಿವೈಎಸ್ಪಿ ಶಾಂತವೀರ ಈ., ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐಗಳಾದ ಅಜಿತಕುಮಾರ ಹೊಸಮನಿ, ಕೆ.ಬಿ.ಮಾಂಗ, ಸಿದ್ದಪ್ಪ ಯಡಹಳ್ಳಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಸಿಬ್ಬಂದಿಗೆ ಬಹುಮಾನ ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.