
ಬಾಗಲಕೋಟೆ: ಜಿಲ್ಲೆಯ ಸಮೀರವಾಡಿ ಗೋದಾವರಿ ಕಾರ್ಖಾನೆ ಬಳಿ ನಡೆದ ಕಲ್ಲು ತೂರಾಟದಲ್ಲಿ ಕಾಲಿಗೆ ಗಂಭೀರ ಗಾಯವಾಗಿದ್ದ ಬಾಗಲಕೋಟೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ವರ ಜಿದ್ದಿ ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಗುರುವಾರ ರಾತ್ರಿಯೇ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಪೊಲೀಸ್ ಹಿರಿಯ ಅಧಿಕಾರಿ ಜಿದ್ದಿ ಅವರ ಕಾಲಿನ ಮೂಳೆಗಳು ಹೆಚ್ಚಿಗೆ ಮುರಿದಿವೆ ಎಂದು ತಿಳಿದು ಬಂದಿದೆ.
ಮಹಾಲಿಂಗಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ಕರೆತರಲಾಗಿತ್ತು.
ರಾತ್ರಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ತುರ್ತಾಗಿ ಅವರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.