
ಪ್ರಜಾವಾಣಿ ವಾರ್ತೆ
ಗೋವಿಂದ ಕಾರಜೋಳ
ಬಾಗಲಕೋಟೆ: ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಎದುರಾದರೆ ಚುನಾವಣೆಗೆ ಹೋಗುತ್ತೇವೆಯೇ ಹೊರತು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಜೊತೆ ಸೇರಿ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಬೆಳವಣಿಗೆಗಳಾದಾಗ ಕಣ್ಣು ಮುಚ್ಚಿ ಕೂಡಲು ಆಗುವುದಿಲ್ಲ. ವಿರೋಧ ಪಕ್ಷವಾಗಿ ಪ್ರತಿಕ್ರಿಯಿಸಬೇಕಾಗುತ್ತದೆ ಎಂದರು.
ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ರಾಜ್ಯಪಾಲರು ಕೂಡಲೇ ಸರ್ಕಾರವನ್ನು ಅಮಾನತ್ತಿನಲ್ಲಿಟ್ಟು ರಾಷ್ಟ್ರಪತಿ ಆಡಳಿತ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.