
ಪಿ.ಎಂ.ನರೇಂದ್ರಸ್ವಾಮಿ
ಬಾಗಲಕೋಟೆ: ಶಾಸಕ ಬಸನಗೌಡ ಪಾಟೀಲ ಯತ್ನಾಳಗೂ, ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಯತ್ನಾಳ ಅವರು ಯತ್ನಾಳ ಆಗಿರಲಿ, ಕಿತ್ನಾಳ ಆಗಬಾರದು ಎಂದು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಲೇವಡಿ ಮಾಡಿದರು.
ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಯತ್ನಾಳ ಹೇಳಿಕೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯತ್ನಾಳ ನನಗೂ ಆತ್ಮೀಯರಾಗಿದ್ದಾರೆ. ತಮಗೆ ಸಂಬಂಧವಿಲ್ಲದ ವಿಷಯದ ಬಗ್ಗೆ ಮಾತನಾಡುತ್ತಾರೆ’ ಎಂದರು.
‘ನವೆಂಬರ್ ಕ್ರಾಂತಿ ಏನೂ ಇಲ್ಲ, ಓನ್ಲಿ ಶಾಂತಿ. ಪಕ್ಷಕ್ಕೆ ಒಳ್ಳೆಯದನ್ನು ಬಯಸಿ. ಮಾಡಬೇಕಿರುವ ಕೆಲಸ ಬಹಳಷ್ಟಿವೆ. ಅದರ ಬಗ್ಗೆ ಚರ್ಚೆ ಮಾಡೋಣ. ಪಕ್ಷದ ಆಂತರಿಕ ವಿಚಾರ ಬೇಡ. ಪಕ್ಷದ ನಿರ್ಧಾರ ಬಗ್ಗೆ ಉತ್ತರ ನೀಡುವುದು ಸಮಂಜಸವಲ್ಲ’ ಎಂದು ಹೇಳಿದರು.
ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಲು ಭೇಟಿಯಾಗಿದ್ದೆ. ರಾಜಕಾರಣದ ಬಗ್ಗೆ ಮಾತನಾಡಿಲ್ಲ. ಅವರೂ ರಾಜಕಾರಣದ ಬಗ್ಗೆ ಕೇಳಿಲ್ಲ. ಮಂಡಳಿ ಅಧ್ಯಕ್ಷನಾದ ಮೇಲೆ ಮಾಡುತ್ತಿರುವ ಕಾರ್ಯದ ಬಗ್ಗೆ ವಿವರಿಸಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.