ಹುನಗುಂದ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ವಿತರಿಸುವ ತೊಗರಿ ಬಿತ್ತನೆ ಬೀಜ ಕಳಪೆ ಆಗಿವೆ ಎಂಬ ರೈತರು ಆರೋಪ ಮಾಡಿದ್ದಾರೆ.
ಸೋಮವಾರ ಬೆಳಿಗ್ಗೆ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ವಿವಿಧ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಕೆಲವು ರೈತರು, ತಾವು ತೆಗೆದುಕೊಂಡ ತೊಗರಿ ಬೀಜದ ಪೊಟ್ಟಣಗಳಲ್ಲಿ ಸಣ್ಣ ಮತ್ತು ದೊಡ್ಡ ಪ್ರಮಾಣದ ಕಾಳುಗಳ ಜೊತೆಗೆ ಬೀಜಗಳು ಕಲಬೆರಕೆ ಆಗಿವೆ ಎಂದು ಆರೋಪಿಸಿ ಪೊಟ್ಟಣಗಳನ್ನು ವಾಪಸ್ ಕೊಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.