ಪ್ರಾತಿನಿಧಿಕ ಚಿತ್ರ
ಬಾಗಲಕೋಟೆ: ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಈ ಆದೇಶ ಉಲ್ಲಂಘಿಸಿದಲ್ಲಿ ದಂಡ ಮತ್ತು ಜೈಲುವಾಸ ವಿಧಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಅನೀಲಕುಮಾರ ತಳಗೇರಿ ತಿಳಿಸಿದ್ದಾರೆ.
ಪಿಒಪಿ ಮತ್ತು ಬಣ್ಣದ ಮೂರ್ತಿಗಳನ್ನು ಜಲಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ಅವಯ ಕಲುಷಿತಗೊಂಡು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತವೆ. ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿದ್ದಾರೆ.
ಗಣೇಶ ವಿಸರ್ಜನೆ ಸಂದರ್ಭದಲ್ಲಿ ಹೂ, ಹಣ್ಣು, ಬಾಳೆ, ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಿ ಕಸ ಸಂಗ್ರಹ ವಾಹನಕ್ಕೆ ನೀಡಬೇಕು. ಮಂಡಳಿ ವತಿಯಿಂದ ನಗರದ ಆಯ್ದ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ಸಂಚಾರಿ ತೊಟ್ಟಿ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲಿಯೇ ವಿಸರ್ಜಿಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.