ADVERTISEMENT

ಸ್ಪರ್ಧಾತ್ಮಕ ಪರೀಕ್ಷೆಗೆ ಆದ್ಯತೆ ನೀಡಿ: ಸಿದ್ದರಾಮಾನಂದಪುರಿ ಸ್ವಾಮೀಜಿ ಸಲಹೆ

ಪ್ರತಿಭಾ ಪುರಸ್ಕಾರ ಸಮಾರಂಭ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 14:08 IST
Last Updated 26 ಅಕ್ಟೋಬರ್ 2020, 14:08 IST
ಬಾಗಲಕೋಟೆಯ ಕಾಳಿದಾಸ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕುರುಬರ ಸಂಘದಿಂದ ನಡೆದ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಬಾಗಲಕೋಟೆಯ ಕಾಳಿದಾಸ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕುರುಬರ ಸಂಘದಿಂದ ನಡೆದ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು   

ಬಾಗಲಕೋಟೆ: ‘ಬರೀ ಪದವಿ ಪಡೆದರೆ ಉಪಯೋಗವಿಲ್ಲ. ಉತ್ತಮ ಅಂಕ ಪಡೆದು ಐಎಎಸ್, ಕೆಎಎಸ್‌ನಂತಹ ಉನ್ನತ ಹುದ್ದೆ ಅಲಂಕರಿಸಬೇಕು. ಇಲ್ಲದಿದ್ದರೆ ಸಾಮಾನ್ಯ ವ್ಯಕ್ತಿಯಾಗಿ ದುಡಿದು ಜೀವನ ಮಾಡಬೇಕು‘ ಎಂದು ತಿಂಥಣಿ ಕನಕಗುರು ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಹೇಳಿದರು.

ಜಿಲ್ಲಾ ಕುರುಬರ ಸಂಘ ಹಾಗೂ ಸಮಾಜದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಇಲ್ಲಿನ ಕಾಳಿದಾಸ ಕಲ್ಯಾಣ ಮಂಟಪದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಬಿಎ, ಬಿಕಾಂ ಓದಿದರೆ ಯಾವುದೇ ಪ್ರಯೋಜನ ಇಲ್ಲ. ಗುರಿ ಇಟ್ಟುಕೊಂಡು ಓದಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಅಂಕ ಪಡೆದು ಉನ್ನತ ಹುದ್ದೆಗೆ ಆಯ್ಕೆಯಾದರೆ ಭವಿಷ್ಯದಲ್ಲಿ ಜೀವನ ಸಾರ್ಥಕವಾಗುತ್ತದೆ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು’ ಎಂದು ಹೇಳಿದರು.

ADVERTISEMENT

ಕಾರ್ಯಕ್ರಮ ಉದ್ದೇಶಿಸಿ ಮಾಜಿ ಸಚಿವ ಎಚ್.ವೈ.ಮೇಟಿ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎಸ್.ಡಿ.ಜೋಗಿನ, ಕಾಂಗ್ರೆಸ್ ಮುಖಂಡ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿದರು.

ಮುಗಳಖೋಡ ಕನಕಬ್ರಹ್ಮ ವಿದ್ಯಾಶ್ರಮದ ಚಿನ್ಮಯಾನಂದ ಸ್ವಾಮೀಜಿ, ಮಕನಾಪುರ ಸೋಮಲಿಂಗೇಶ್ವರ ಗುರುಪೀಠದ ಸೋಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಕುರುಬ ಸಮುದಾಯದ 250 ಕ್ಕೂ ಹೆಚ್ಚು ವಿದ್ಯಾಥಿಗಳನ್ನು ಸನ್ಮಾನಿಸಲಾಯಿತು.

ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಿ.ಸಿದ್ದಾಪುರ ಪ್ರಾಸ್ಥಾವಿಕವಾಗಿ ಮಾತನಾಡಿದರು. ಶಿಕ್ಷಕ ವೈ.ಆರ್.ಭೂತಾಳಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಆಸೆಂಗೆಪ್ಪ ನಕ್ಕರಗುಂದಿ, ರಾಜ್ಯ ಕುರುಬರ ಸಂಘದ ನಿದೇರ್ಶಕ ಶ್ರೀಶೈಲ ದಳವಾಯಿ, ಶಶಿಕಾಂತ ಉದಗಟ್ಟಿ, ಹನಮಂತ ಅಪ್ಪನ್ನವರ, ಎಸ್.ಎಸ್.ಪಾಟೀಲ, ಹನಮಂತ ದೇವರಮನಿ, ಆತ್ಮಾನಂದ ಜಾಲಿಹಾಳ, ಮಲ್ಲು ವಡಗೇರಿ, ರವಿ ಒಡ್ಡೊಡಗಿ, ಬಸವರಾಜ ಭೂತಾಳಿ, ರೇವಣಸಿದ್ದಪ್ಪ ನೋಟಗಾರ, ಮಂಜುನಾಥ ಹೊಸಮನಿ, ಬಿ.ಎಚ್.ಮೇಟಿ, ವೀರಣ್ಣ ಹಳೇಗೌಡರ, ರಾಧಾ ಆಕಳವಾಡಿ, ಶಿವು ಹನಮಕ್ಕನ್ನವರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.