ADVERTISEMENT

ಮುಧೋಳ: ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 16:06 IST
Last Updated 5 ಆಗಸ್ಟ್ 2024, 16:06 IST
ಮುಧೋಳದ ರನ್ನ ವೃತ್ತದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯಪಾಲರ ನಡೆ ಖಂಡಿಸಿ ನಗರದ ರನ್ನ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು
ಮುಧೋಳದ ರನ್ನ ವೃತ್ತದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯಪಾಲರ ನಡೆ ಖಂಡಿಸಿ ನಗರದ ರನ್ನ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು   

ಮುಧೋಳ: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿರುವ ಬಿಜೆಪಿ , ಜೆಡಿಎಸ್ ಹಾಗೂ ರಾಜ್ಯಪಾಲರ ನಡೆ ಖಂಡಿಸುತ್ತೇವೆ ಎಂದು ಹೋರಾಟಗಾರ ಯಲ್ಲಪ್ಪ ಹೆಗಡೆ ಹೇಳಿದರು.

ಅವರು ಸೋಮವಾರ ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯಪಾಲರ ನಡೆ ಖಂಡಿಸಿ ನಗರದ ರನ್ನ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಅಲ್ಪಸಂಖ್ಯಾತ ಜಿಲ್ಲಾ ಘಟಕದ ಅಧ್ಯಕ್ಷ ಶಫೀಕ್ ಬೇಪಾರಿ ಮಾತನಾಡಿ, ಯಾರಿಂದಲೂ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದರು.

ADVERTISEMENT

ಜಾವೀದ್ ಹವಾಲ್ದಾರ್, ಭೀಮಸಿ ಅಂಬಿಗೇರ ಮುಂತಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.