ಹುನಗುಂದ: ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ನಾಲ್ಕು ಕಾನೂನುಗಳನ್ನು ಹಿಂಪಡೆಯಬೇಕು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಶಾ ಕಾರ್ಯಕರ್ತೆಯರ ತಾಲ್ಲೂಕು ಘಟಕವು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಪಟ್ಟಣದ ತಹಶೀಲ್ದಾರ್ ನಿಂಗಪ್ಪ ಬಿರಾದಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ತಾಲ್ಲೂಕು ಘಟಕದ ಶೈನಜಾ ಜಂಗಿ ಮಾತನಾಡಿ, ನಾಲ್ಕು ಕಾರ್ಮಿಕ ಸಮಿತಿಗಳನ್ನು ಕೂಡಲೇ ರದ್ದುಗೊಳಿಸಬೇಕು ಅಸಂಘಟಿತ ವಲಯದ ಕಾರ್ಮಿಕರು ಗುತ್ತಿಗೆ ಕಾರ್ಮಿಕರು ಮತ್ತು ಸ್ಕೀಮ್ ಕಾರ್ಮಿಕರು ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ರಾಷ್ಟ್ರೀಯ ಕನಿಷ್ಠ ವೇತನ 26 ಸಾವಿರ ನೀಡುವುದು.
ಎಲ್ಲ ಕಾರ್ಮಿಕರಿಗೆ ಕನಿಷ್ಠ 9000 ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತ ಪಡಿಸಬೇಕು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು. ನಮ್ಮ ರಾಜ್ಯದಲ್ಲಿ ಫ್ಯಾಕ್ಟರಿ ಕಾಯಿದೆಗೆ ತಿದ್ದುಪಡಿ ಮಾಡುವ ಮೂಲಕ ಹಿಂಭಾಗಲಿನಿಂದ ಅಣೋಪಚಾರಿಕವಾಗಿ ತರಲು ಯತ್ನಿಸುವುದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ಕೇಂದ್ರ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ ದುಡಿಯುವ ಜನತೆಯ ಮೇಲೆ ಒಂದಾದ ನಂತರ ಮತ್ತೊಂದು ದಾಳಿಯನ್ನು ದೂರಗೊಳಿಸುತ್ತಿದೆ ಇದರಿಂದ ಬಡತನ ಹಸಿವು ಅಪೌಷ್ಟಿಕತೆಯೊಡನೆ ನಿರ್ಗತಿಕರಾಗಿಸುವುದರ ಜೊತೆಗೆ ನಿರುದ್ಯೋಗ ಮತ್ತು ಕೆಲಸವಿಲ್ಲದವರ ಸಂಖ್ಯೆ ಹೆಚ್ಚಾಗುತ್ತಿದೆ ಜೊತೆಗೆ ಕಾರ್ಪೊರೇಟ್ ಮತ್ತು ದೊಡ್ಡ ಉದ್ಯಮಿಗಳ ಲಾಭವು ಅನೇಕ ಪಟ್ಟು ಹೆಚ್ಚಾಗಿದೆ ಎಂದರು.
ಆಶಾ ಕಾರ್ಯಕರ್ತೆಯರ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ. ಭೂಪರದ, ಉಪಾಧ್ಯಕ್ಷೆ ಅಂಬಿಕಾ ಡೊಳ್ಳಿನ, ಗಿರಿಜಾ ಗೌಡರ, ಭಾಗಿರಥಿ ನಾಡಗೌಡರ, ಗಂಗಮ್ಮ ಕುಂಟೋಜಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.