ಕಲಾದಗಿ: ವಾಲ್ಮೀಕಿ ನಿಗಮದಲ್ಲಿನ ಹಗರಣವನ್ನು ಖಂಡಿಸಿ ಗ್ರಾಮದ ಮಹರ್ಷಿ ವಾಲ್ಮೀಕಿ ಗ್ರಾಮೀಣಾಭಿವೃದ್ಧಿ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಯಿತು.
ಗ್ರಾಮದ ಗಡ್ಡಿ ಓಣಿಯಿಂದ ಪ್ರಾರಂಭವಾದ ಪ್ರತಿಭಟನೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಾಡ ಕಚೇರಿಗೆ ತೆರಳಿ ಉಪ ತಹಶೀಲ್ದಾರ್ ಆರ್.ಆರ್.ಕುಲಕರ್ಣಿ ಅವರಿಗೆ ಮಹರ್ಷಿ ವಾಲ್ಮೀಕಿ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಮುಖಂಡರಾದ ರಾಮಣ್ಣ ತಳವಾರ,ಹನಮಂತ ತಳವಾರ (ಶಿಲ್ಪಿ) ರಾಮಣ್ಣ ಕ್ವಾಟಿ, ತುಳಸಪ್ಪ ತಳವಾರ,ಯಲ್ಲಪ್ಪ ಆಡಗಲ್, ಯಲ್ಲಪ್ಪ ತಳವಾರ, ದುರ್ಗಪ್ಪ ಹಾದಿಮನಿ, ಮಹೇಶ ಆಡಗಲ್, ಯಮನಪ್ಪ ಬೂದಿಹಾಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.