ಮುಧೋಳ: ‘ಮಹಿಳೆಯರು ಹಾಗೂ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ದೌರ್ಜನ್ಯವೆಸಗುವುದು ಅಕ್ಷಮ್ಯ ಅಪರಾಧವಾಗಿದೆ. ಅಪರಧಿಗಳನ್ನು ಗಲ್ಲಿಗೇರಿಸುವ ಮೂಲ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಕೆಪಿಸಿಸಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಶಫಿಕ್ ಬೇಪಾರಿ ಹೇಳಿದರು.
ನಗರದ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಅಲ್ಪಸಂಖ್ಯಾತ ಸೌಹಾರ್ದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಮಾತನಾಡಿದರು.
ಸಿಮ್ರಿನ್ ಬಿಸ್ತಿ ಮಾತನಾಡಿ, ‘ಜಾತಿ ಮತ ಪಂಥಗಳ ಭೇದಭಾವ ಮಾಡದೆ ಅತ್ಯಾಚಾರದಲ್ಲಿ ತೊಡಗುವ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಸಂತ್ರಸ್ತರಿಗೆ ನ್ಯಾಯ ಒದಗಿಸಲು ನಿರಂತರ ಶ್ರಮಿಸುತ್ತೇವೆ’ ಎಂದು ಒತ್ತಾಯಿಸಿದರು.
ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಮಾತನಾಡಿ, ‘ಇಂತಹ ಘಟನೆಗಳನ್ನು ಮುಂದಿಟ್ಟುಕೊಂಡು ಸಮಾಜದ ಸ್ವಾಸ್ಥ್ಯ ಹಾಳುಮಾಡುವ ಶಕ್ತಿಗಳನ್ನು ಮಟ್ಟಹಾಕಬೇಕು’ ಎಂದು ಆಗ್ರಹಿಸಿದರು.
ಇದಕ್ಕೂ ಮುನ್ನ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.
ಮಲ್ಲಿಕ್ ಗೋರಿ, ಜಾವೀದ್ ಹವಾಲ್ದಾರ್, ಅಲ್ಲಾಭಕ್ಷ ಮಾವತ, ಹಸೀನಾ ನದಾಫ್, ರಾಜಮಾ ಬೇಪಾರಿ, ಅಸ್ಲಂ ಗಲಗಲಿ, ಯಾಸೀನ್ ಜಹಾಗೀರದಾರ್, ನೂರಲ್ಲಾ ಶೇಖ್, ಸಲೀಂ ಪೀರಜಾದೆ, ಹಾಜಿ ಮೋಮಿನ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.