ಬಾಗಲಕೋಟೆ: ಲ್ಯಾಪ್‌ಟಾಪ್ ಬಳಸಿಕೊಂಡು ಜನರಿಗೆ ತ್ವರಿತವಾಗಿ ಸೇವೆಗಳನ್ನು ಒದಗಿಸಬೇಕು ಎಂದು ಶಾಸಕ ಎಚ್.ವೈ. ಮೇಟಿ ಹೇಳಿದರು.
ಬಾಗಲಕೋಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಒಂಬತ್ತು ಗ್ರಾಮ ಆಡಳಿತಾಧಿಕಾರಿಗಳಿಗೆ ಬುಧವಾರ ಶಾಸಕ ಕಚೇರಿಯಲ್ಲಿ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಅವರು, ಇ ಕಚೇರಿ ಅಪ್ಲಿಕೇಷನ್‌ಗಳನ್ನು ಸುಲಭವಾಗಿ ನಿರ್ವಹಿಸಲು ಅನುಕೂಲವಾಗುತ್ತದೆ. ತಂತ್ರಜ್ಞಾನದ ಸರಿಯಾದ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಸೀತಿಮನಿ ವಲಯದ ಬಿಲ್ಲಕೆರೂರ, ರಾಂಪೂರ, ಸುತಗುಂಡಾರ, ಹಿರೇಗುಳಬಾಳ ಹಾಗೂ ಬಾಗಲಕೋಟೆ ವಲಯದ ಬಾಗಲಕೋಟೆ, ಶಿರೂರ, ಬೇವಿನಮಟ್ಟಿ, ಹಳ್ಳೂರ ಹಾಗೂ ಬೆನಕಟ್ಟಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಎನ್.ರಾಂಪುರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ತಹಶೀಲ್ದಾರ್ ಅಮರೇಶ ಪಮ್ಮಾರ, ಮಹಾಂತೇಶ ಬಿರಾದಾರ, ನಾಗರಾಜ ಹದ್ಲಿ, ದ್ಯಾಮಣ್ಣ ಗಾಳಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.