ADVERTISEMENT

ಭಾರತೀಯ ಸಂಸ್ಕೃತಿ ಮುಂದುವರಿಸಿ: ಪಿಎಸ್‌ಐ ಕೃಷ್ಣವೇಣಿ ಗುರ್ಲಹೊಸುರ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2023, 13:47 IST
Last Updated 9 ಆಗಸ್ಟ್ 2023, 13:47 IST
ಇಳಕಲ್‌ನ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಭಾರತೀಯ ಸಂಸ್ಕೃತಿ ದಿನಾಚರಣೆಯ ಸಮಾರಂಭದಲ್ಲಿ ಪಿಎಸ್‌ಐ ಕೃಷ್ಣವೇಣಿ ಗುರ್ಲಹೊಸೂರ ಮಾತನಾಡಿದರು.
ಇಳಕಲ್‌ನ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಭಾರತೀಯ ಸಂಸ್ಕೃತಿ ದಿನಾಚರಣೆಯ ಸಮಾರಂಭದಲ್ಲಿ ಪಿಎಸ್‌ಐ ಕೃಷ್ಣವೇಣಿ ಗುರ್ಲಹೊಸೂರ ಮಾತನಾಡಿದರು.   

ಇಳಕಲ್: ‘ಭಾರತೀಯ ಸಂಸ್ಕೃತಿಯು ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ಮರುಳಾಗದೇ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು’ ಎಂದು ನಗರ ಪೊಲೀಸ್‌ ಠಾಣೆಯ ಪಿಎಸ್‌ಐ ಕೃಷ್ಣವೇಣಿ ಗುರ್ಲಹೊಸುರ ಸಲಹೆ ನೀಡಿದರು.

ಇಲ್ಲಿಯ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಭಾರತೀಯ ಸಂಸ್ಕೃತಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕಾಲೇಜು ಕಮಿಟಿ ಚೇರಮನ್ ಬಿ.ಎಂ. ಕಬ್ಬಿಣದ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಬಿ.ಬಿ. ಸುಗ್ಗಮದ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಠ್ಯೇತರ ಚಟುಚಟಿಕೆಯ ಸಂಚಾಲಕ ಎಸ್.ಎಸ್ .ಪಾಟೀಲ, ವಿದ್ಯಾರ್ಥಿ ಒಕ್ಕೂಟದ ಸಂಚಾಲಕಿ ಎಸ್.ಆರ್. ಕಲ್ಯಾಣಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಮಧು ಮಾದರ, ಶಶಿಕಲಾ ಪೂಜಾರ, ಸ್ಫೂರ್ತಿ ಗೋಟುರ, ಅನುರಾಧಾ ಜಂಬಲದಿನ್ನಿ, ಪವಿತ್ರಾ ಗೌಡರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.