ADVERTISEMENT

ಬಾಗಲಕೋಟೆ: ‘ಪ್ರಜಾವಾಣಿ – ರಸಪ್ರಶ್ನೆ ಚಾಂಪಿಯನ್‌‌ಶಿಪ್‌’

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 2:59 IST
Last Updated 8 ಡಿಸೆಂಬರ್ 2025, 2:59 IST
   

ಬಾಗಲಕೋಟೆ: ‘ಪ್ರಜಾವಾಣಿ– ರಸಪ್ರಶ್ನೆ ಚಾಂಪಿಯನ್‌ ಶಿಪ್‌’ ಈ ಬಾರಿ ಬಾಗಲಕೋಟೆಯಲ್ಲಿ ಡಿಸೆಂಬರ್ 9ರಂದು ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ, ನೋಂದಣಿ ಮಾಡಿಕೊಳ್ಳಬಹುದು.

ಬಾಗಲಕೋಟೆಯ ನವನಗರದ ಸೆಕ್ಟರ್ ಸಂಖ್ಯೆ–19ರ ಕಲಾಭವನದಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಎಲ್ಲರಿಗೂ ಉಚಿತ ಪ್ರವೇಶವಿದೆ. ಸ್ಪರ್ಧೆ ನಡೆಯುವ ಸ್ಥಳದಲ್ಲೂ ನೋಂದಾಯಿಸಬಹುದು.

ಈ ವಲಯದಲ್ಲಿ ವಿಜೇತರಾದವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗುತ್ತಾರೆ. ವಿದ್ಯಾರ್ಥಿಗಳು ಶಾಲೆಗಳ ಮೂಲಕ ತಂಡವಾಗಿ ನೋಂದಾಯಿಸಿಕೊಳ್ಳಬಹುದು. ತಂಡಗಳಿಗೆ ಪ್ರಾಥಮಿಕ ಹಂತದ ಪರೀಕ್ಷೆ ನಡೆಸಲಾಗುತ್ತದೆ.

ADVERTISEMENT

ಹೆಚ್ಚಿನ ಮಾಹಿತಿಗೆ ಬೆಳಿಗ್ಗೆ 10 ರಿಂದ ಸಂಜೆ 5ರೊಳಗೆ ಸಂಪರ್ಕಿಸಬೇಕಾದ ದೂರವಾಣಿ

ಸಂಖ್ಯೆ: 73380 18541.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.