ADVERTISEMENT

ರಬಕವಿ ಬನಹಟ್ಟಿ ತಾಲ್ಲೂಕು ಮಟ್ಟದ ನಿವೃತ್ತ ನೌಕರರ ಸಮ್ಮೇಳನ 23ರಂದು

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 4:34 IST
Last Updated 18 ನವೆಂಬರ್ 2025, 4:34 IST
   

ರಬಕವಿ ಬನಹಟ್ಟಿ: ಇದೇ 23ರಂದು ರಬಕವಿಯ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ಬೆಳಗ್ಗೆ 9 ಕ್ಕೆ ತಾಲ್ಲೂಕು ಮಟ್ಟದ ನಿವೃತ್ತ ನೌಕರರ ಸಮ್ಮೇಳನವನ್ನು ಮತ್ತು 75 ವಸಂತಗಳನ್ನು ಪೂರೈಸಿದ ತಾಲ್ಲೂಕಿನ ಹಿರಿಯ ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಸಿದ್ದು ಸವದಿ ಕಾರ್ಯಕ್ರಮ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ರಬಕವಿ ಬನಹಟ್ಟಿ ತಾಲ್ಲೂಕು ಘಟಕದ ಅಧ್ಯಕ್ಷ ಮೃತ್ಯುಂಜಯ ರಾಮದುರ್ಗ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಸಿದ್ದು ದಿವಾಣ ಮತ್ತು ಎಂ.ಎಸ್.ಬದಾಮಿ ಉಪನ್ಯಾಸ ನೀಡಲಿದ್ದಾರೆ. ಸಿದ್ಧರಾಮ ಮನಹಳ್ಳಿ, ವಿ.ಜಿ.ಗೋವಿಂದಪ್ಪಗೋಳ, ವಿಜಯರಾವ ಕುಲಕರ್ಣಿ, ಮಲ್ಲಿಕಾರ್ಜುನ ಕೋಟಿ, ತಹಶೀಲ್ದಾರ್ ಗಿರೀಶ ಸ್ವಾದಿ, ಎಸ್.ಆರ್.ಪಾಟೀಲ, ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ, ಸಂಘದ ಉಪಾಧ್ಯಕ್ಷ ಶಶಿಕಾಂತ ಹುನ್ನೂರ ಸೇರಿದಂತೆ ಅನೇಕರು ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಕಾರ್ಯದರ್ಸಿ ಬಿ.ಎಂ.ಮಟ್ಟಿಕಲ್ಲಿ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.