ತೇರದಾಳ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಗುರು ರಾಘವೇಂದ್ರ ಸ್ವಾಮಿ ಶ್ರೀಮಠ ಹಾಗೂ ಮೂಲಮೃತ್ತಿಕಾ ಬೃಂದಾವನದ ಪ್ರತಿಷ್ಠಾಪನೆ ಕಾರ್ಯಕ್ರಮ ಶುಕ್ರವಾರ ಅತ್ಯಂತ ಶ್ರದ್ಧೆ ಹಾಗೂ ಭಕ್ತಿ ಭಾವದಿಂದ ಜರುಗಿತು. ಮಂತ್ರಾಲಯ ರಾಘವೇಂದ್ರ ಶ್ರೀಗಳ ಮೂಲ ಸಂಸ್ಥಾನ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.
ಪುರಪ್ರವೇಶ ಮಾಡಿದ ಸ್ವಾಮೀಜಿ ಅವರನ್ನು ಮಹಿಳೆಯರ ಪೂರ್ಣಕುಂಭದೊಂದಿಗೆ ಶೋಭಾಯಾತ್ರೆ ಮೂಲಕ ಶ್ರೀಮಠಕ್ಕೆ ಕರೆತರಲಾಯಿತು. ಭಕ್ತರ ವೇದಘೋಷ, ಕಲಾತಂಡಗಳು ಶೋಭಾಯಾತ್ರೆಗೆ ಮೆರುಗು ನೀಡಿದವು. ಬಳಿಕ ಅವರು ಪ್ರತಿಷ್ಟಾಂಗ ಕಲಶಸ್ಥಾಪನೆ, ಷೋಡಶೋಪಚಾರ ಪೂಜೆ, ಬೃಂದಾವನಕ್ಕೆ ಕಲಶಾಭಿಷೇಕ, ಪ್ರಾಣಪ್ರತಿಷ್ಠಾಪನೆ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳು ಜರುಗಿದವು.
ಪಂಚಾಮೃತಾಭಿಷೇಕ, ಮಂಗಳಾರತಿ ಕೂಡ ಜರುಗಿದವು. ಪಟ್ಟಣ ಸೇರಿದಂತೆ ರಾಜ್ಯದ ವಿವಿಧ ಕಡೆಯಿಂದ ಹಾಗೂ ಮಹಾರಾಷ್ಟ್ರದಿಂದ ಆಗಮಿಸಿದ ವಿಪ್ರ ಸಮಾಜದ ಬಾಂಧವರು ಭಾಗವಹಿಸಿದ್ದರು. ಭಕ್ತರಿಗೆ ಅನ್ನಪ್ರಸಾದ ವಿತರಣೆಯಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.