ಇಳಕಲ್: ಕಂಠಿ ವೃತ್ತದ ಸಮೀಪದ ನಗರಸಭೆಯ ನೆಲಮಹಡಿಯ ವಾಣಿಜ್ಯ ಮಳಿಗೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಅಂಗಡಿಯಲ್ಲಿರುವ ವಸ್ತುಗಳು ಹಾಳಾಗಿವೆ.
‘ನೆಲ ಮಹಡಿಯಲ್ಲಿ ಬಿದ್ದ ಮಳೆ ನೀರು ಮುಂದೆ ಸಾಗಲು ವ್ಯವಸ್ಥೆ ಇಲ್ಲ. ಪ್ರತಿ ಸಲ ಮಳೆ ಬಂದಾಗ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ನಗರಸಭೆ ಸಿಬ್ಬಂದಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ’ ಎಂದು ವಾಣಿಜ್ಯ ಮಳಿಗೆಗಳ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದರು.
‘ಅವೈಜ್ಞಾನಿಕ ಗಟಾರ ನಿರ್ಮಾಣ, ಕಸ ವಿಲೇವಾರಿ ಮಾಡದಿರುವುದು, ಸ್ವಚ್ಛತೆ ಕೊರತೆಯಿಂದ ಸಮಸ್ಯೆಯಾಗುತ್ತಿದೆ. ನಗರಸಭೆ ಮಳಿಗೆಗಳ ನಿರ್ವಹಣೆ ಮಾಡುತ್ತಿಲ್ಲ. ಮಳೆಗಾಲ ಆರಂಭವಾಗಿದ್ದು, ವಾಣಿಜ್ಯ ಮಳಿಗೆಗಳಲ್ಲಿರುವ ಬೆಲೆಬಾಳುವ ವಸ್ತುಗಳು, ಪೀಠೋಪಕರಣಗಳು ಹಾಳಾಗುತ್ತಿವೆ. ದಯವಿಟ್ಟು ಮಳೆ ನೀರು ಸಾರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕು’ ಎಂದು ವ್ಯಾಪಾರಿಗಳು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.