ADVERTISEMENT

ಕೊಲೆ ಆರೋಪಿಗಳಿಗೆ ಶಿಕ್ಷೆ ವಿಧಿಸಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 15:43 IST
Last Updated 13 ಆಗಸ್ಟ್ 2024, 15:43 IST
ವೈದ್ಯಕೀಯ ವಿದ್ಯಾರ್ಥಿನಿ ಕೊಲೆ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಐಎಂಎ ಸದಸ್ಯರು ಬಾಗಲಕೋಟೆಯಲ್ಲಿ ಮಂಗಳವಾರ ಮೋಂಬತ್ತಿ ಹಿಡಿದು ಪ್ರತಿಭಟನೆ ಮಾಡಿದರು
ವೈದ್ಯಕೀಯ ವಿದ್ಯಾರ್ಥಿನಿ ಕೊಲೆ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಐಎಂಎ ಸದಸ್ಯರು ಬಾಗಲಕೋಟೆಯಲ್ಲಿ ಮಂಗಳವಾರ ಮೋಂಬತ್ತಿ ಹಿಡಿದು ಪ್ರತಿಭಟನೆ ಮಾಡಿದರು   

ಬಾಗಲಕೋಟೆ: ಕೋಲ್ಕತ್ತಾದಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಕೊಲೆ ಆಗಿರುವುದನ್ನು ಖಂಡಿಸಿ ಮೋಂಬತ್ತಿ ಹಚ್ಚಿ ಇಂಡಿಯನ್‌ ಮೆಡಿಕಲ್‌ ಅಸೋಸಿಯೇಷನ್‌ ಸದಸ್ಯರು, ವಿದ್ಯಾರ್ಥಿಗಳು ಮಂಗಳವಾರ ರ್‍ಯಾಲಿ ನಡೆಸಿದರು.

ಕಾಲೇಜಿನಲ್ಲಿಯೇ ಕೊಲೆ ನಡೆದಿರುವುದು ಅಚ್ಚರಿ ಮೂಡಿಸಿದೆ. ಕೇರಳದಲ್ಲಿಯೂ ಯುವ ವೈದ್ಯರೊಬ್ಬರ ಕೊಲೆ ಮಾಡಲಾಗಿದೆ. ವೈದ್ಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಕೆಲಸ ಸ್ಥಳದಲ್ಲಿ ವೈದ್ಯರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದರು

ADVERTISEMENT

ಅಸೋಸಿಯೇಷನ್‌ ಅಧ್ಯಕ್ಷ ಡಾ.ಅರುಣ ಮಿಸ್ಕಿನ್‌, ಕಾರ್ಯದರ್ಶಿ ಡಾ.ಪ್ರಮೋದ ಮಿರ್ಜಿ, ಡಾ.ಟಿ.ಎನ್‌. ಪಾಟೀಲ, ಡಾ.ಎಳಮಲಿ, ಡಾ.ಕಲಬುರ್ಗಿ, ಡಾ‌.ಶೇಖರ ಮಾನೆ, ಡಾ.ಪಟ್ಟೆದ, ಡಾ.ಆಶಾಲತ ಮಲ್ಲಾಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.