ADVERTISEMENT

ರಾಂಪುರ: ಹೆಜ್ಜೇನು ಕಚ್ಚಿ ವಿದ್ಯಾರ್ಥಿಗಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 4:29 IST
Last Updated 3 ಸೆಪ್ಟೆಂಬರ್ 2025, 4:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಂಪುರ: ಹೆಜ್ಜೇನು ಕಚ್ಚಿ ಇಬ್ಬರು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಸಮೀಪದ ಸುತಗುಂಡಾರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಸ್ಥಳೀಯ ಕರಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿರುವ ಮರವೊಂದರಲ್ಲಿ ಇದ್ದ ಹೆಜ್ಜೇನು ಗೂಡಿಗೆ ಯಾರೋ ಕಿಡಿಗೇಡಿಗಳು ಕಲ್ಲೆಸೆದರು. ಶಾಲೆಗೆ ಬಂದ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿರುವ ಜೇನು ಹುಳುಗಳು ಇಬ್ಬರು ವಿದ್ಯಾರ್ಥಿಗಳಿಗೆ ಕಚ್ಚಿವೆ. ಉಳಿದ ವಿದ್ಯಾರ್ಥಿಗಳು ಓಡಿ ಹೋಗಿ ತಪ್ಪಿಸಿಕೊಂಡರು.

ಶಾಲೆಯ ಶಿಕ್ಷಕರು ತಕ್ಷಣ ಕಾರು ತರಿಸಿ ಜೇನುಹುಳ ಕಚ್ಚಿದ ಇಬ್ಬರು ವಿದ್ಯಾರ್ಥಿಗಳನ್ನು ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು. ಮಧ್ಯಾಹ್ನದ ಹೊತ್ತಿಗೆ ಇಬ್ಬರೂ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ ಎಂದು ಶಾಲೆಯ ಶಿಕ್ಷಕರಾದ ಎ.ಎಲ್. ಬಡಿಗೇರ ಹಾಗೂ ಎಂ.ಎಸ್.ಬಸವನಾಳ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.