ರಾಜ್ಯಪಾಲ ಥಾವರಚಂದ್ ಗೆಹಲೋತ್–
ಪ್ರಜಾವಾಣಿ ಚಿತ್ರ
ಬಾಗಲಕೋಟೆ: ಜಿಲ್ಲೆಯ ಮುಧೋಳದ ರನ್ನ ಸಕ್ಕರೆ ಕಾರ್ಖಾನೆ ಟೆಂಡರ್‌ನಲ್ಲಿ ಅವ್ಯವಹಾರವಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. ಅವರು ಕ್ರಮಕೈಗೊಳ್ಳದ್ದರಿಂದ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು ಎಂದು ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಸಿದ್ದು ತೇಜಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಖಾನೆ ಷೇರುದಾರ ಸಿದ್ದಾರೂಢ ಕಂಬಳಿ ದೂರು ನೀಡಿದ್ದರು. ಆದರೆ, ಇಲ್ಲಿಯವರೆಗೆ ಯಾರಿಗೂ ನೋಟಿಸ್ ನೀಡಿಲ್ಲ ಎಂದು ದೂರಿದರು.
ಅರ್ಹತಾ ಷರತ್ತು, ಬಿಡ್ ಷರತ್ತು, ಸಾಲಗಳ ಹೊಣೆಗಾರಿಕೆ ವಿಷಯದಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ. ಈ ಬಗ್ಗೆ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದರು.
ಸಿದ್ದಾರೂಢ ಕಂಬಳಿ ಮಾತನಾಡಿ, ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.