ಬಾಗಲಕೋಟೆ: ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಅಪರಾಧಿಗೆ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶರಾದ ಪಿ.ಎಸ್. ಸದರಜೋಶಿ ಆದೇಶಿಸಿದ್ದಾರೆ.
ಇಳಕಲ್ ತಾಲ್ಲೂಕಿನ ಬಸಪ್ಪ ಗುರಿಕಾರ ಶಿಕ್ಷೆಗೆ ಒಳಗಾದ ವ್ಯಕ್ತಿ. ನೊಂದವರಿಗೆ ₹4 ಲಕ್ಷ ಪರಿಹಾರ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.
2024 ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಮನೆ ಹಾಗೂ ಹೊಲದಲ್ಲಿ ಅಪರಾಧಿಯು ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ್ದನು. ಆಗಿನ ಡಿವೈಎಸ್‌ಪಿ ವಿಶ್ವನಾಥರಾವ್ ಕುಲಕರ್ಣಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕ ವಿ.ಜಿ. ಹೆಬಸೂರ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.