
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ‘ನನ್ನ ತೇಜೋವಧೆ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವೆ’ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೋಮವಾರ ಇಲ್ಲಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಚಿವ ಆದಂದಿನಿಂದ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಇದರಲ್ಲಿ ಏನೋ ಕುತಂತ್ರವಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರು ನನ್ನನ್ನು ಏನೂ ಕೇಳಿಲ್ಲ’ ಎಂದು ತಿಳಿಸಿದರು.
‘₹10 ಲಕ್ಷ ಕೊಡುತ್ತೇನೆ ಸುದ್ದಿ ಹಾಕಬೇಡಿ ಎಂದು ಯಾರಾದರೂ ಹೇಳಿದರೆ ನೀವು ಆಪಾದಿತ ಆಗುತ್ತೀರಾ’ ಎಂದು ಸುದ್ದಿಗಾರರನ್ನು ಪ್ರಶ್ನಿಸಿದ ಅವರು, ‘ಆರೋಪಿಸುವವರು ಸಾಕ್ಷಿ ನೀಡಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.