ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಚಳಿ ತೀವ್ರಗೊಂಡಿದ್ದು, ಮುಂಜಾನೆಯ ಚಳಿ ಮೈನಡುಗಿಸುತ್ತಿದೆ.
ಬಾಗಲಕೋಟೆಯಲ್ಲಿ ಸೋಮವಾರ ಕನಿಷ್ಠ ಉಷ್ಣಾಂಶ 8.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುಂದಿನ 48 ಗಂಟೆಯಲ್ಲಿ ಒಳನಾಡಿನ ಹಲವು ಸ್ಥಳಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗಲು ವೇಳೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬೆಳಿಗ್ಗೆ ದಟ್ಟ ಮಂಜು ಕವಿದ ವಾತಾವರಣ ಇರಲಿದ್ದು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.