ಕೆರೂರ: ಇಲ್ಲಿನ ಸರ್ಕಾರಿ ಹೆಣ್ಣು ಮಕ್ಕಳ ಶಾಲಾ ಕಾಂಪೌಂಡ್‌ಗೆ ಹೊಂದಿಕೊಂಡ ಅನಧಿಕೃತ ಶೆಡ್‌ಗಳನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿ ಶುಕ್ರವಾರ ತೆರವುಗೊಳಿಸಿದರು.
ಹಲವು ವರ್ಷಗಳಿಂದ ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಶೆಡ್‌ಗಳನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವು ಕಾರ್ಯಾಚರಣೆಗೆ ನಡೆಯಿತು.
ದೂರು: ಶಾಲೆಯ ಕಾಂಪೌಂಡ್‌ಗೆ ಹೊಂದಿಕೊಂಡ ಅನಧಿಕೃತ ಶೆಡ್‌ಗಳಲ್ಲಿ ದನಗಳನ್ನು ಕಟ್ಟಲಾಗುತ್ತಿತ್ತು. ಸ್ನಾನದ ನೀರು ಶಾಲಾ ಆವರಣದ ಮೈದಾನದಲ್ಲಿ ಹರಿಯುತ್ತಿತ್ತು. ಇಲ್ಲಿ ತ್ಯಾಜ್ಯ ಹಾಗೂ ಮಲಿನಗೊಂಡ ನೀರಿನಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿತ್ತು. ಆದ್ದರಿಂದ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ ಮಾಡಬಾಳ ಮಾತನಾಡಿ, ‘ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಶೆಡ್‌ಗಳನ್ನು ನಿರ್ಮಾಣ ಮಾಡಿಕೊಂಡ ಮಾಲೀಕರಿಗೆ ಸಾಕಷ್ಟು ಬಾರಿ ತೆರವುಗೊಳಿಸಲು ಸೂಚಿಸಲಾಗಿತ್ತು. ಇದೀಗ ಮೇಲಧಿಕಾರಿಗಳ ಆದೇಶದಂತೆ ನಮ್ಮ ಪೌರಕಾರ್ಮಿಕ ಸಿಬ್ಬಂದಿ ಹಾಗೂ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು’ ಎಂದು ಹೇಳಿದರು.
ಕಿಲ್ಲಾ ಪೇಟೆಗೆ ಹೋಗುವ ರಸ್ತೆಯ ಸಾರ್ವಜನಿಕ ಶೌಚಾಲಯದ ಪಕ್ಕದಲ್ಲಿ ಅನಧಿಕೃತವಾಗಿ ಶೆಡ್‌ಗಳನ್ನು ನಿರ್ಮಿಸಿದ್ದರಿಂದ ಶೌಚಾಲಯಕ್ಕೆ ಹೋಗುವ ದಾರಿ ಬಂದ್ ಆಗಿತ್ತು. ಆ ಶೆಡ್‌ಗಳನ್ನೂ ತೆರವುಗೊಳಿಸಲಾಯಿತು.
ಸಿಬ್ಬಂದಿ ಎಂ.ಐ. ಹೊಸಮನಿ, ನವೀನ ಮಾಹಜನವರ, ಸಂಗಮೇಶ ಮಾದರ, ಪೌರಕಾರ್ಮಿಕರು, ಪೊಲೀಸ್ ಸಿಬ್ಬಂದಿ ಎಸ್.ಎಂ. ಬಗಲಿ, ಪ್ರವೀಣ ಘಾಟಗೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.