ADVERTISEMENT

ಜಮಖಂಡಿ: ಮೀಸಲಾತಿಗೆ ಆಗ್ರಹಿಸಿ ರಸ್ತೆಯಲ್ಲಿ ಇಷ್ಟಲಿಂಗ‌ ಪೂಜೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2023, 9:06 IST
Last Updated 18 ಸೆಪ್ಟೆಂಬರ್ 2023, 9:06 IST
   

ಜಮಖಂಡಿ: ಪಂಚಮಸಾಲಿ ಸಮಾಜದ ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಮೀಸಾಲತಿ ಬೇಡಿಕೆ ಈಡೇರಿಸಬೇಕು. ಮೊದಲ ಅಧಿವೇಶನ ಮುಗಿದ ಬಳಿಕ ಬೇಡಿಕೆ ಈಡೇರಿಸುವುದಾಗಿ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ತಪ್ಪಿದ್ದಾರೆ. ಹೀಗಾಗಿ, ಆರನೇ ಹಂತದ ಹೋರಾಟ ಅನಿವಾರ್ಯವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಲಿಂಗಾಯತ ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಸಹಯೋಗದಲ್ಲಿ ಸೋಮವಾರ ಬಸವೇಶ್ವರ ವೃತ್ತದ ಹತ್ತಿರ ರಾಜ್ಯ ಹೆದ್ದಾರಿ ಮೇಲೆ ಜಿಲ್ಲಾ ಮಟ್ಟದ ಸಾಮೂಹಿಕ ಇಷ್ಟಲಿಂಗ ಪೂಜೆ‌ ಮೂಲಕ ಮೀಸಲಾತಿ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಉಪ ಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಿ ಆಗಲಿ. 2ಎ ಮೀಸಲಾತಿ ಹೋರಾಟಕ್ಕೆ ಶಕ್ತಿ ಬರಲಿ, ಬರಗಾಲ ನಿವಾರಣೆಯಾಗಿ ರೈತರ ಸಂಕಷ್ಟ ದೂರವಾಗಲಿ, ನೂತನ ಸರ್ಕಾರ ಮೀಸಲಾತಿ ನೀಡಲಿ ಎಂದೂ ಪ್ರಾರ್ಥಿಸುತ್ತೇವೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೀಣಾ ಕಾಶಪ್ಪನವರ, ಅಧ್ಯಕ್ಷ ಮಹಾದೇವ ಇಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಏಗಪ್ಪ ಸವದಿ ಸೇರಿದಂತೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.