ರಬಕವಿ ಬನಹಟ್ಟಿ: ಸಮೀಪದ ಯಲ್ಲಟ್ಟಿ ಗ್ರಾಮದಲ್ಲಿ ಮಂಗಳವಾರ ಮನೆಯಿಂದ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಟ್ರ್ಯಾಕ್ಟರ್ ಹಾಯ್ದ ಪರಿಣಾಮ ಶಾಲಾ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ಸಂಸ್ಕೃತಿ ಭಜಂತ್ರಿ (13) ಮೃತ ಬಾಲಕಿ.
ಗ್ರಾಮದ ರಾಣಿ ಚನ್ನಮ್ಮ ವೃತ್ತದ ಬಳಿ ಬೆಳಿಗ್ಗೆ 9.30ಕ್ಕೆ ಸೈಕಲ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಟಾಕ್ಟರ್ ಚಾಲಕ ವೇಗವಾಗಿ ಬಂದಿದ್ದರಿಂದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದ್ದಾನೆ. ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗೆ ಜಮಖಂಡಿಯಿಂದ ವಿಜಯಪುರಕ್ಕೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾಳೆ.
ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಿಎಸ್ಐ ಶಾಂತಾ ಹಳ್ಳಿ ತನಿಖೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.