ADVERTISEMENT

ಈ ವರ್ಷ 28 ಸಾವಿರ ಕಿ.ಮೀ ರಸ್ತೆ ಮೇಲ್ದರ್ಜೆಗೆ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 7:06 IST
Last Updated 9 ಜೂನ್ 2020, 7:06 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬಾಗಲಕೋಟೆ: ಲೋಕೋಪಯೋಗಿ ಇಲಾಖೆಯಿಂದ ರಾಜ್ಯದಲ್ಲಿ ಈ ವರ್ಷ 18 ಸಾವಿರ ಕಿ.ಮೀ ಹಳ್ಳಿ ರಸ್ತೆಯನ್ನು ಅಭಿವೃದ್ಧಿಪಡಿಸಿ ಜಿಲ್ಲಾ ಮುಖ್ಯರಸ್ತೆಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

10 ಸಾವಿರ ಕಿ.ಮೀ. ಜಿಲ್ಲಾ ಮುಖ್ಯರಸ್ತೆಯನ್ನು ರಾಜ್ಯ ಹೆದ್ದಾರಿಯಾಗಿ ಪರಿವರ್ತಿಸುವುದು ಸೇರಿದಂತೆ ಒಟ್ಟು 28 ಸಾವಿರ ಕಿ.ಮೀ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಟ್ರೈನಿ ಎಂಜಿನಿಯರ್‌ಗಳ ನೇಮಕಕ್ಕೆ ಸಿದ್ಧತೆ: ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ 1000 ಮಂದಿ ಟ್ರೈನಿ ಎಂಜಿನಿಯರ್ ಗಳ ನೇಮಕ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ.

ADVERTISEMENT

ಇದರಲ್ಲಿ 700 ಮಂದಿ ಪದವೀಧರ ಎಂಜಿನಿಯರ್ ಹಾಗೂ 300 ಮಂದಿ ಡಿಪ್ಲೊಮಾ ಎಂಜಿನಿಯರ್ ಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.